
ನವದೆಹಲಿ ರೈಲು ನಿಲ್ದಾಣದಲ್ಲಿ (New Delhi Railway Station) ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಈ ಘಟನೆಯಲ್ಲಿ 15 ಜನರು ಮೃತಪಟ್ಟಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ಭಾರತೀಯ ರೈಲ್ವೆ ಇಲಾಖೆಯ ಪ್ರಕಾರ, ರಾತ್ರಿ 10 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಘಟನೆ ನಡೆದಿದ್ದು ಹೇಗೆ?
ಪ್ರಯಾಗರಾಜ್ ಕುಂಭಮೇಳಕ್ಕೆ (Kumbhamela) ಹೋಗುವ ರೈಲಿಗೆ ಹತ್ತಲು ಜನಸಂದಣ ಉಂಟಾದ ಕಾರಣ ನವದೆಹಲಿ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಪ್ಲಾಟ್ಫಾರ್ಮ್ನಲ್ಲಿ ನಿಂತಿದ್ದ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತಲು ಜನರು ಪರಸ್ಪರ ತಳ್ಳಾಡಿಕೊಂಡಾಗ ಈ ದುರ್ಘಟನೆ ಸಂಭವಿಸಿದೆ. ಎನ್ಡಿಆರ್ಎಫ್ (NDRF) ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿದರು.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ ಕನ್ನಡದ ಖ್ಯಾತ ನಟ ಅರೆಸ್ಟ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ
ಕಾಲ್ತುಳಿತ ದುರಂತದ ಬಗ್ಗೆ ತಿಳಿದು ಬೇಸರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆ ನಾವು ನಿಲ್ಲುತ್ತೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
Click Here: ಮೊಹಮ್ಮದ್ ಘಜ್ನಿ ಕೈಗೆ ಸಿಕ್ಕಿ ತುಂಡಾಗಿದ್ದ ಸೋಮನಾಥ ದೇವಾಲಯದ ಪ್ರಾಚೀನ ಶಿವಲಿಂಗ ಮರು ಪ್ರತಿಷ್ಠಾಪನೆಯಾಗುತ್ತಾ?
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.