ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ನಡುಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಹಣಕ್ಕಾಗಿ ತನ್ನ ಹೆಂಡತಿಯನ್ನು ಸ್ನೇಹಿತರಿಗೆ ಒಪ್ಪಿಸಿದ್ದಾನೆ ಎಂಬ ಆರೋಪದ ಮೇಲೆ ಒಬ್ಬ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಏನಿದು ಘಟನೆ?
ಫೈಜ್ಗಂಜ್ ಬೆಹ್ತಾ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯ ಹೇಳಿಕೆಯ ಪ್ರಕಾರ, ಭಾನುವಾರ ಸಂಜೆ ಗ್ಯಾಸ್ ಏಜೆನ್ಸಿಗೆ ತೆರಳುವ ಸಂದರ್ಭದಲ್ಲೇ, ತನ್ನ ಪತಿ ಸ್ನೇಹಿತರಾದ ಇಬ್ಬರಿಂದ ಸಾವಿರ ರೂಪಾಯಿ ಪಡೆದು ತನ್ನನ್ನು ಅವರೊಂದಿಗೆ ಕಳುಹಿಸಿದ್ದಾನೆ ಎಂದು ಆರೋಪಿಸಿದ್ದಾರೆ.
ಮಹಿಳೆಯ ದೂರಿನ ಪ್ರಕಾರ, ಆ ಬಳಿಕ ಆ ಇಬ್ಬರು ವ್ಯಕ್ತಿಗಳು ತನ್ನನ್ನು ಒಂಟಿ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆ ಬಳಿಕ ಆತಂಕಗೊಂಡ ಮಹಿಳೆ ತಕ್ಷಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಇದನ್ನೂ ಓದಿ: ಮಗಳ ಮೊಬೈಲ್ ನಲ್ಲಿ ತಾಯಿಯ ಖಾಸಗಿ ಫೋಟೋಗಳು! ಮಗಳೇ ಬ್ಲ್ಯಾಕ್ಮೇಲ್ ಮಾಡಲು ಮುಂದಾಗಿದ್ದಳು!
ಮಹಿಳೆಯ ದೂರು ಆಧರಿಸಿ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಾದ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದ್ದು, ಮಹಿಳೆಯ ಪತಿಯಿಗಾಗಿ ಹುಡುಕಾಟ ಮುಂದುವರಿದಿದೆ.
ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಶ್ರೀ ರಾಮ ಅವರು ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ, ಟ್ರೆಂಡಿಂಗ್ ಕಥೆಗಳು ಹಾಗೂ ಅವುಗಳ ವಿಶ್ಲೇಷಣೆಯನ್ನು ನಿಖರವಾಗಿ ಓದುಗರಿಗೆ ತಲುಪಿಸುವಲ್ಲಿ ಅವರಿಗೆ ವಿಶೇಷ ಪರಿಣತಿ ಇದೆ. ರಾಜಕೀಯ ಸೇರಿದಂತೆ ಹಲವು ವಿಷಯಗಳಿಂದ ಸುದ್ದಿ ಸಂಗ್ರಹಣೆ, ವರದಿಗಾರಿಕೆ ಮತ್ತು ಸಂದರ್ಶನಗಳಲ್ಲಿ ಶ್ರೀ ರಾಮ ಉತ್ತಮ ನೈಪುಣ್ಯ ಪ್ರದರ್ಶಿಸಿದ್ದಾರೆ.
