ಚುನಾವಣೆಗೂ ಮುನ್ನವೇ CAA ಜಾರಿಯಾಗಲಿದೆ - ಅಮಿತ್ ಶಾ
2024 ರ ಲೋಕಸಭಾ ಚುನಾವಣೆಗೂ ಮುನ್ನವೇ ದೇಶದಲ್ಲಿ ಸಿಎಎ {CAA} ಕಾನೂನನ್ನು ಜಾರಿಗೊಳಿಸುತ್ತೇವೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ ಅವರು ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. CAA ಈ ದೇಶದ ಕಾನೂನು ಎಂದು ಹೇಳಿದ್ದಾರೆ. ನಾನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ನರೇಂದ್ರ ಮೋದಿಯವರು ಕಳೆದ 40 ವರ್ಷಗಳಿಂದ ಭಾರತ ದೇಶದ ಜನರಿಗಾಗಿ ಮಾತ್ರ ಕೆಲಸ ಮಾಡಿದ್ದಾರೆ.
ಇದನ್ನು ಓದಿ: Maha Shivaratri 2024: ಶಿವರಾತ್ರಿ ಹಬ್ಬದ ಶುಭಾಶಯಗಳು
23 ವರ್ಷಗಳ ಕಾಲ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯಾದ ನಂತರವು ನರೇಂದ್ರ ಮೋದಿಯವರು ರಜೆಯನ್ನು ತೆಗೆದುಕೊಂಡಿದ್ದನ್ನು ನಾನು ನೋಡಿಲ್ಲ ಎಂದು ಅಮಿತ್ ಶಾ ಮೋದಿಯವರನ್ನು ಕೊಂಡಾಡಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ 400 ಸೀಟು ದಾಟುವ ಗುರಿಯನ್ನು ಹೊಂದಿದ್ದೇವೆ
ಇಂದು ಬಿಜಿಪಿ, NDA ದೇಶದಾದ್ಯಂತ ಭಾರಿ ಜನರ ಬೆಂಬಲವನ್ನು ಪಡೆಯುತ್ತಿದೆ. ನಾನು ದೇಶದ ಮೂಲೆ ಮೂಲೆಗೆ ಹೋಗಿದ್ದೇನೆ. ದೇಶದ ಜನರು ನರೇಂದ್ರ ಮೋದಿಯವರ ಬೆಂಬಲಕ್ಕೆ ನಿಂತಿದ್ದಾರೆ. ಹಾಗಾಗಿ ನಾವು 400 ಸೀಟು ದಾಟುವ ಗುರಿಯನ್ನು ಹೊಂದಿದ್ದೇವೆ ಎಂದು ಅಮಿತ್ ಶಾ ಹೇಳಿದರು.
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
