ರಾಜ್ಯದಲ್ಲಿರುವ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಯೆ ಗೃಹಜ್ಯೋತಿ ಯೋಜನೆ. ಗೃಹಜ್ಯೋತಿ ಯೋಜನೆಗೆ ಜೂನ್ 18 ರಿಂದ ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆಯ ಫಲಾನುಭವಿಗಳು ಜೂನ್ 18 ರಿಂದ ಅವರ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಹೇಳಲಾಗಿದೆ.
ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್, ಗ್ರಾಹಕ ಐ ಡಿ ವಿದ್ಯುತ್ ಬಿಲ್ ನಲ್ಲಿ ಇರುವಂತೆ ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತೆ.ಸೇವಾ ಸಿಂಧು ಪೋರ್ಟಲ್, ಗ್ರಾಮ್ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡುವ ಅವಕಾಶವಿದೆ.
ಇದನ್ನೂ ಓದಿ: ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ
ಗೃಹಜ್ಯೋತಿ ಯೋಜನೆಯು 2023ರ ಆಗಸ್ಟ್ 1 (ಜುಲೈ ತಿಂಗಳ ವಿದ್ಯುಚ್ಛಕ್ತಿ ಬಳಕೆ ) ರಿಂದ ಜಾರಿಗೆ ಬರಲಿದೆ. ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ತಾರೀಕಿನಿಂದ ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ.
ಗೃಹಜ್ಯೋತಿ ಯೋಜನೆಯ ಷರತ್ತುಗಳು
- ಈ ಯೋಜನೆಯು ಗೃಹ ಬಳಕೆ ವಿದ್ಯುತ್ ಗೆ ಮಾತ್ರ ಅನ್ವಯವಾಗುತ್ತೆ.
- ವಾಣಿಜ್ಯ ಬಳಕೆಗೆ ವಿದ್ಯುತ್ ಬಳಸಿದರೆ ಯೋಜನೆ ಅನ್ವಯವಾಗುವುದಿಲ್ಲ.
- ಪ್ರತಿ ತಿಂಗಳು ಮೀಟರ್ ರೀಡಿಂಗ್ ಮಾಡಿದಾಗ ವಿದ್ಯುತ್ ಬಳಸಿದ ಪ್ರಮಾಣಕ್ಕೆ ನಮೂದಿಸುವುದು.
- ಅರ್ಹ ಯೂನಿಟ್ ಒಳಗೆ ವಿದ್ಯುತ್ ಬಳಕೆ ಆಗಿದ್ದರೆ ಗ್ರಾಹಕರಿಗೆ ಶೂನ್ಯ ಬಿಲ್ ನೀಡಲಾಗುತ್ತದೆ.
- ಸೇವಾ ಸಿಂಧು ಪೋರ್ಟಲ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು.
- ಫಲಾನುಭವಿಯು Customer ID/ Account ID ಅನ್ನು ಆಧಾರ್ಗೆ ಕಡ್ಡಾಯವಾಗಿ ಲಿಂಕ್ ಮಾಡುವುದು.