ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಪ್ರದೇಶದಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ಘಟನೆಯು ಇಂದು ಸಂಜೆ ನಡೆದಿದ್ದು, ಪ್ರವಾಸಿಗರ ಗುಂಪಿನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ.
ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರು ತಮ್ಮ ಕುಟುಂಬದೊಂದಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ ಸಂಭವಿಸಿದೆ. ಸಂತೋಷದ ಪ್ರವಾಸದಲ್ಲಿದ್ದ ಮಂಜುನಾಥ್ ಸೇರಿದಂತೆ ಹಲವು ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಾರಣಾಂತಿಕ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಮಂಜುನಾಥ್ ಅವರು ಸಾವನ್ನಪ್ಪಿದ್ದು, ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಮಗು ಮಾಡಿಕೊಂಡರೆ 4.25 ಲಕ್ಷ ರೂಪಾಯಿ ಬೋನಸ್!
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಸಕ್ರಿಯರಾಗಿದ್ದ ಮಂಜುನಾಥ್ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದವರು. ಆದರೆ, ತಮ್ಮ ವೃತ್ತಿ ಜೀವನಕ್ಕಾಗಿ ಪತ್ನಿ, ತಾಯಿ ಮತ್ತು ಮಕ್ಕಳೊಂದಿಗೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ ನೆಲೆಸಿದ್ದರು. ಕೇವಲ ನಾಲ್ಕೈದು ದಿನಗಳ ಹಿಂದೆಯಷ್ಟೇ ಅವರು ತಮ್ಮ ಪತ್ನಿ ಪಲ್ಲವಿಯೊಂದಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಪ್ರವಾಸದ ಸಂತಸದಲ್ಲಿದ್ದಾಗ ಈ ದುರಂತ ಸಂಭವಿಸಿದೆ.
ಈ ದುರಂತ ಘಟನೆಯು ಇಂದು ಮಧ್ಯಾಹ್ನ 2:30ರ ಸುಮಾರಿಗೆ ಸಂಭವಿಸಿದ್ದು, ಮಾಹಿತಿ ಲಭ್ಯವಾದ ತಕ್ಷಣ ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಟ್ರೆಕ್ಕಿಂಗ್ಗೆ ತೆರಳಿದ್ದ ಪ್ರವಾಸಿಗರ ಮೇಲೆ ಈ ದಾಳಿ ನಡೆದಿದೆ. ಸದ್ಯಕ್ಕೆ ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ದಾಳಿ ನಡೆಸಿದ ಅಪರಿಚಿತ ಭಯೋತ್ಪಾದಕನಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೇಶಾದ್ಯಂತ ನಕಲಿ ₹500 ನೋಟುಗಳ ಚಲಾವಣೆ! ಅಸಲಿ-ನಕಲಿ ಕಂಡುಹಿಡಿಯುವ ಟ್ರಿಕ್ ಇಲ್ಲಿದೆ
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
