Cow Slaughter: ಬಕ್ರೀದ್ ಗಾಗಿ ಗೋವುಗಳ ಮಾರಣ ಹೋಮ...!
ಬಕ್ರೀದ್ {Eid al Adha} ಹಬ್ಬದ ಹಿನ್ನಲೆ ಅನಧಿಕೃತ ಪ್ರಾಣಿ ವಧೆಯನ್ನು [Cow Slaughter] ನಿರ್ಬಂದಿಸಲಾಗಿದ್ದರೂ ಸಹ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಷ್ಟಿಗೇರಿ ಗ್ರಾಮದಲ್ಲಿರುವ ಒಂದು ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ಅಂದಾಜು 9 ರಿಂದ 10 ಗೋವುಗಳನ್ನು ಕಡಿಯಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಗೋ ಹತ್ಯೆಯನ್ನು ಖಂಡಿಸಿ ಬಾದಾಮಿ ಪಟ್ಟಣದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ ಕೂಡ ನಡೆಸಲಾಯಿತು. ರಸ್ತೆ ಬಂದ್ ಮಾಡಿ ಟೈಯರ್ ಗಳಿಗೆ ಬೆಂಕಿ ಹಾಕಿ ಕಾರ್ಯಕರರು ಆಕ್ರೋಶವನ್ನು ಹೊರಹಾಕಿದರು. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು. ನಂತರ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ. ಗೋ ಹಂತಕರನ್ನು ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
