
ಇದು ನಂಬಿಕೆಯಿಲ್ಲದ ಕಾಲ. ನಿಮ್ಮ ಬಳಿಯಿರುವ ಹೊಚ್ಚ ಹೊಸ ನೋಟು ಕೂಡಾ ಅಸಲಿಯೋ ನಕಲಿಯೋ ಎಂದು ಖಚಿತಪಡಿಸಿಕೊಳ್ಳಿ! ಏಕೆಂದರೆ ಸ್ವತಃ ಕೇಂದ್ರ ಗೃಹ ಸಚಿವಾಲಯವೇ (MHA) ಈ ಕುರಿತು ಎಚ್ಚರಿಕೆ ಗಂಟೆ ಬಾರಿಸಿದೆ. ನಿಮ್ಮ ಜೇಬಿನಲ್ಲಿರುವ ಗರಿಗರಿ ನೋಟು ನಿಜಕ್ಕೂ ಮೌಲ್ಯಯುತವಾಗಿದೆಯೇ ಎಂದು ಪರೀಕ್ಷಿಸಿಕೊಳ್ಳುವುದು ಈಗ ಅತ್ಯಂತ ಮುಖ್ಯವಾಗಿದೆ.
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ದೇಶಾದ್ಯಂತ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳು ಚಲಾವಣೆಯಲ್ಲಿವೆ ಎಂಬ ರಹಸ್ಯ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುವಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಸೂಚನೆ ನೀಡಿದೆ.
ದೇಶದ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ಹಾಗೂ ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳಿಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಎಚ್ಚರಿಕೆ ನೀಡಿದೆ. ರಹಸ್ಯ ಮಾಹಿತಿಯ ಪ್ರಕಾರ, ದೇಶಾದ್ಯಂತ ಅತ್ಯುತ್ತಮ ಗುಣಮಟ್ಟದ ನಕಲಿ ನೋಟುಗಳು ಚಲಾವಣೆಯಲ್ಲಿವೆ. ಈ ನಕಲಿ ನೋಟುಗಳು ಅಸಲಿ ನೋಟುಗಳ ಗುಣಮಟ್ಟವನ್ನು ಹೋಲುತ್ತಿದ್ದು, ಅವುಗಳನ್ನು ಗುರುತಿಸುವುದು ಕಷ್ಟಕರವಾಗಿದೆ. ಹೀಗಾಗಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: 30 ವರ್ಷಗಳಲ್ಲಿ ಮುಸ್ಲಿಂ ಜನಸಂಖ್ಯೆ ಶೇ 90ರಷ್ಟು ಹೆಚ್ಚಳ!
ನಕಲಿ ನೋಟುಗಳನ್ನು ಕಂಡುಹಿಡಿಯುವುದು ಹೇಗೆ?
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಅಸಲಿ ಮತ್ತು ನಕಲಿ ನೋಟುಗಳನ್ನು ಗುರುತಿಸುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಅಸಲಿ ನೋಟುಗಳಲ್ಲಿ ‘RESERVE BANK OF INDIA’ ಎಂದು ಮುದ್ರಿಸಿರುತ್ತದೆ. ಆದರೆ, ಅದೇ ರೀತಿಯಲ್ಲಿ ಕಾಣುವ ನಕಲಿ ನೋಟುಗಳಲ್ಲಿ ‘A’ ಎಂಬ ಅಕ್ಷರದ ಸ್ಥಳದಲ್ಲಿ ‘E’ ಎಂದು ಮುದ್ರಿಸಲಾಗಿರುತ್ತದೆ. ಈ ಒಂದು ಸಣ್ಣ ವ್ಯತ್ಯಾಸದ ಮೂಲಕ ನಕಲಿ ನೋಟುಗಳನ್ನು ಸುಲಭವಾಗಿ ಗುರುತಿಸಬಹುದು ಎಂದು ತಿಳಿಸಲಾಗಿದೆ.
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು (MHA) ದೇಶಾದ್ಯಂತ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳು ಚಲಾವಣೆಯಲ್ಲಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ DRI (ಕಂದಾಯ ಗುಪ್ತಚರ ನಿರ್ದೇಶನಾಲಯ), FIU (ಹಣಕಾಸು ಗುಪ್ತಚರ ಘಟಕ), CBI (ಕೇಂದ್ರೀಯ ತನಿಖಾ ದಳ), NIA (ರಾಷ್ಟ್ರೀಯ ತನಿಖಾ ಸಂಸ್ಥೆ), SEBI (ಭಾರತೀಯ ಷೇರು ಮತ್ತು ವಿನಿಮಯ ಮಂಡಳಿ) ಮುಂತಾದ ಸಂಸ್ಥೆಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.