
ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಮಾರುಕಟ್ಟೆಯಲ್ಲಿ ಕಲ್ಲಂಗಡಿ ಹಣ್ಣಿನ ವ್ಯಾಪಾರವು ಭರದಿಂದ ಸಾಗುತ್ತದೆ. ಈ ಹಣ್ಣಿನಲ್ಲಿ ಹೆಚ್ಚಿನ ನೀರಿನಂಶವಿರುವುದರಿಂದ, ಇದು ದೇಹದಲ್ಲಿನ ನಿರ್ಜಲೀಕರಣವನ್ನು ತಡೆದು ದೇಹವನ್ನು ತಂಪಾಗಿರಿಸುತ್ತದೆ. ಹೀಗಾಗಿ, ಗ್ರಾಹಕರು ಕೂಡ ಮುಗಿಬಿದ್ದು ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ. ಆದರೆ, ರಾಜ್ಯದ ಮಾರುಕಟ್ಟೆಗಳಲ್ಲಿ ನಕಲಿ ಕಲ್ಲಂಗಡಿ ಹಣ್ಣುಗಳು ಮಾರಾಟವಾಗುತ್ತಿರುವುದರಿಂದ ಗ್ರಾಹಕರು ಎಚ್ಚರಿಕೆಯಿಂದ ಇರಬೇಕಾಗಿದೆ.
ಕಲ್ಲಂಗಡಿ ಹಣ್ಣಿನ ಬಣ್ಣವನ್ನು ನೋಡಿ ಮಾರುಹೋಗುವ ಮುನ್ನ ಎಚ್ಚರವಿರಲಿ. ಯಾಕೆಂದರೆ, ವ್ಯಾಪಾರಿಗಳು ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತಿದ್ದಾರೆ. ಇಂತಹ ಕಲ್ಲಂಗಡಿ ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.
ಕಲ್ಲಂಗಡಿ ಹಣ್ಣು ಖರೀದಿಸುವ ಮುನ್ನ ಎಚ್ಚರ!
ಕಲಬೆರಕೆ ಕಲ್ಲಂಗಡಿ ಹಣ್ಣುಗಳನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಅವುಗಳಲ್ಲಿ ಫುಡ್ ಪಾಯ್ಸನಿಂಗ್ ಪ್ರಮುಖವಾದದ್ದು. ಈ ರೀತಿಯ ಕಲಬೆರಕೆ ಹಣ್ಣುಗಳನ್ನು ತಿಂದರೆ ವಾಂತಿ, ಭೇದಿ ಮತ್ತು ಹೊಟ್ಟೆ ನೋವಿನಂತಹ ತೊಂದರೆಗಳು ಕಾಣಿಸಿಕೊಳ್ಳಬಹುದು. ಗಂಭೀರ ಪ್ರಕರಣಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಕೂಡ ಬರಬಹುದು.
ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳನ್ನು ಬಳಸಿ ಕಲ್ಲಂಗಡಿ ಹಣ್ಣುಗಳನ್ನು ಮಾಗಿಸಲಾಗುವುದರಿಂದ, ಅವು ವಿಷಕಾರಿಯಾಗಿ ಪರಿವರ್ತನೆಯಾಗುತ್ತವೆ. ಇವುಗಳನ್ನು ಸೇವಿಸುವುದರಿಂದ ದೇಹದಲ್ಲಿ ವಿಷದ ಅಂಶ ಹೆಚ್ಚಾಗಿ ಫುಡ್ ಪಾಯ್ಸನಿಂಗ್ ಉಂಟಾಗುತ್ತದೆ.
ರಾಸಾಯನಿಕಗಳನ್ನು ಬಳಸಿ ತಯಾರಿಸಿದ ಕಲ್ಲಂಗಡಿ ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರಬಹುದು. ಈ ಹಣ್ಣುಗಳಲ್ಲಿರುವ ಕೃತಕ ಪದಾರ್ಥಗಳು ಜೀರ್ಣಕ್ರಿಯೆಗೆ ಅಡ್ಡಿಪಡಿಸಿ ಹೊಟ್ಟೆ ಉಬ್ಬುವುದು, ಗ್ಯಾಸ್, ಹೊಟ್ಟೆ ನೋವು ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ದೀರ್ಘಕಾಲದವರೆಗೆ ಇಂತಹ ಹಣ್ಣುಗಳನ್ನು ಸೇವಿಸಿದರೆ, ಜೀರ್ಣಾಂಗ ವ್ಯವಸ್ಥೆಯು ದುರ್ಬಲಗೊಳ್ಳಬಹುದು.
ಇದನ್ನೂ ಓದಿ: ಮಾರುಕಟ್ಟೆಗೆ ಬಂದ ಕೆಮಿಕಲ್ ಕಲ್ಲಂಗಡಿ ಪತ್ತೆ ಹಚ್ಚುವುದು ಹೇಗೆ?
ಕಲಬೆರಕೆ ಕಲ್ಲಂಗಡಿ ಹಣ್ಣುಗಳನ್ನು ಸೇವಿಸುವುದರಿಂದ ಹಸಿವಿನ ಕೊರತೆ ಉಂಟಾಗಬಹುದು. ಇಂತಹ ಹಣ್ಣುಗಳಲ್ಲಿನ ರಾಸಾಯನಿಕ ಪದಾರ್ಥಗಳು ಹಸಿವನ್ನು ನಿಯಂತ್ರಿಸುವ ಹಾರ್ಮೋನುಗಳ ಮೇಲೆ ಪರಿಣಾಮ ಬೀರುತ್ತವೆ. ಇದರಿಂದಾಗಿ ಸರಿಯಾದ ಸಮಯಕ್ಕೆ ಹಸಿವು ಆಗುವುದಿಲ್ಲ ಮತ್ತು ಊಟ ಮಾಡಲು ಸಾಧ್ಯವಾಗುವುದಿಲ್ಲ.
ನಕಲಿ ಕಲ್ಲಂಗಡಿ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿ ಸುಸ್ತು ಮತ್ತು ಬಾಯಾರಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಕಲ್ಲಂಗಡಿ ಹಣ್ಣನ್ನು ಸಾಮಾನ್ಯವಾಗಿ ಬಾಯಾರಿಕೆ ನೀಗಿಸಲು ಸೇವಿಸಲಾಗುತ್ತದೆ. ಆದರೆ ಕಲಬೆರಕೆ ಹಣ್ಣುಗಳು ಇದಕ್ಕೆ ವಿರುದ್ಧವಾಗಿ ವರ್ತಿಸುತ್ತವೆ.
ಕಲಬೆರಕೆ ಕಲ್ಲಂಗಡಿ ಹಣ್ಣುಗಳನ್ನು ಸೇವಿಸುವುದರಿಂದ ಕಿಡ್ನಿಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಆಹಾರ ತಜ್ಞರು ಎಚ್ಚರಿಸಿದ್ದಾರೆ. ಈ ಹಣ್ಣುಗಳಲ್ಲಿ ಬಳಸಲಾಗುವ ಅಪಾಯಕಾರಿ ರಾಸಾಯನಿಕ ಪದಾರ್ಥಗಳು ಮತ್ತು ಕೃತಕ ಬಣ್ಣಗಳು ಕಿಡ್ನಿ ಆರೋಗ್ಯಕ್ಕೆ ಹಾನಿಕಾರಕವಾಗಬಹುದು.
ಕಿಡ್ನಿಗಳು ದೇಹದಿಂದ ವಿಷಕಾರಿ ತ್ಯಾಜ್ಯಗಳನ್ನು ಹೊರಹಾಕುವ ಪ್ರಮುಖ ಅಂಗಗಳಾಗಿವೆ. ಕಲಬೆರಕೆ ಹಣ್ಣುಗಳಲ್ಲಿನ ರಾಸಾಯನಿಕಗಳು ಕಿಡ್ನಿಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಬಹುದು ಮತ್ತು ದೀರ್ಘಕಾಲದವರೆಗೆ ಇಂತಹ ಹಣ್ಣುಗಳನ್ನು ಸೇವಿಸಿದರೆ, ಕಿಡ್ನಿ ವೈಫಲ್ಯದಂತಹ ಗಂಭೀರ ಸಮಸ್ಯೆಗಳು ಉಂಟಾಗಬಹುದು.
Sri Rama is a seasoned journalist with four years of experience, specializing in capturing and analyzing the latest news and trending stories. He brings extensive expertise in news collection, reporting, and interviewing across a broad spectrum of topics, including politics.