Ankola: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ಮೃತದೇಹ ಪತ್ತೆಯಾಗಿದೆ. ಇನ್ನುಳಿದವರ ಮೃತದೇಹಗಳಿಗಾಗಿ NDRF ಶೋಧ ಕಾರ್ಯ ಮುಂದುವರಿಸಿದೆ.
ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಅವಾಂತಿಕಾ ಹಾಗೂ ಪುತ್ರ ರೋಷನ್ ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ಕು ಜನರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹಗಳನ್ನು ಇಡಲಾಗಿದೆ.
ಈ ಗುಡ್ಡ ಕುಸಿದ ಸ್ಥಳದಲ್ಲಿ ಮೊದಲು ಓರ್ವ ಮಹಿಳೆಯ ಶವ ಪತ್ತೆಯಾಗಿತ್ತು. ನಂತರ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ ಇನ್ನುಳಿದ ಇಬ್ಬರು ಯಾರೆಂದು ಗುರುತು ಸಿಗುತ್ತಿಲ್ಲ.
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
