
ಕರ್ನಾಟಕದ ಕರಾವಳಿ ಭಾಗದಲ್ಲಿ ಉಷ್ಣ ಅಲೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇರುವುದರಿಂದ, ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದ ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ನಷ್ಟು ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು. ಇದಕ್ಕೆ ವಿರುದ್ಧವಾಗಿ, ಒಳನಾಡಿನ ಚಾಮರಾಜನಗರದಲ್ಲಿ 14.3 ಡಿಗ್ರಿ ಸೆಲ್ಸಿಯಸ್ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.
ರಾವಳಿ ತೀರದ ಕಾರವಾರ ಮತ್ತು ಪಣಂಬೂರಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕರಾವಳಿ ಕರ್ನಾಟಕದ ಮಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನಲ್ಲಿಯೂ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ.
ಕರಾವಳಿಯಲ್ಲಿ 36-37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಹಾವೇರಿಯಲ್ಲಿ 32-34 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬಾಗಲಕೋಟೆ, ಕಲಬುರಗಿಯಲ್ಲಿ 35-37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರು, ಆಗುಂಬೆಯಲ್ಲಿ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಇದನ್ನೂ ಓದಿ: ಕಲ್ಲಂಗಡಿ ಪ್ರಿಯರೇ ಎಚ್ಚರ! ಮಾರುಕಟ್ಟೆಗೆ ಬಂದ ಕೆಮಿಕಲ್ ಕಲ್ಲಂಗಡಿ ಪತ್ತೆ ಹಚ್ಚುವುದು ಹೇಗೆ?
ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. ಅದರಲ್ಲೂ ಮಡಿಕೇರಿಯಲ್ಲಿ ಕನಿಷ್ಠ ತಾಪಮಾನವು -2.8 ಡಿಗ್ರಿ ಸೆಲ್ಸಿಯಸ್ನಷ್ಟು ಗಣನೀಯವಾಗಿ ಕುಸಿದಿದೆ. ಇದು ರಾಜ್ಯದಲ್ಲೇ ಅತಿ ಕಡಿಮೆ ತಾಪಮಾನವೆಂದು ದಾಖಲಾಗಿದೆ.
ಕರಾವಳಿ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 22-23 ಡಿಗ್ರಿ ಸೆಲ್ಸಿಯಸ್ನಷ್ಟಿದ್ದು, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ ಮತ್ತು ಧಾರವಾಡದಲ್ಲಿ 19-22 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಈ ಅಂಕಿಅಂಶಗಳು ಕರ್ನಾಟಕದ ವಿವಿಧ ಪ್ರದೇಶಗಳಲ್ಲಿನ ತಾಪಮಾನದ ವೈವಿಧ್ಯತೆಯನ್ನು ತೋರಿಸುತ್ತವೆ.
ಬೆಂಗಳೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Sri Rama is a seasoned journalist with four years of experience, specializing in capturing and analyzing the latest news and trending stories. He brings extensive expertise in news collection, reporting, and interviewing across a broad spectrum of topics, including politics.