
ತೆರವು ಮಾಡಿದ ಜಾಗದಲ್ಲೇ ಹನುಮ ಧ್ವಜ ಹಾರಿಸಿದ ಸಂಸದ ಅನಂತ್ ಕುಮಾರ್ ಹೆಗಡೆ
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಹನುಮ ಧ್ವಜ ತೆರವು ಮಾಡಿದ ಸ್ಥಳದಲ್ಲೇ ಮತ್ತೆ ಹನುಮ ಧ್ವಜವನ್ನು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ನಡೆದಿದೆ.
ಅನಧಿಕೃತವಾಗಿ ಕಟ್ಟೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ತೆಂಗಿನಗುಂಡಿ ಗ್ರಾಮದಲ್ಲಿ ಕಟ್ಟಲಾಗಿದ್ದ ಧ್ವಜ ಕಟ್ಟೆ ಹಾಗೂ ವೀರ ಸಾವರ್ಕರ್ ಅವರ ಬೋರ್ಡ್ ಅನ್ನು ತೆರವು ಮಾಡಲಾಗಿತ್ತು. ಇದಕ್ಕೆ ಸ್ಥಳೀಯ ಹಿಂದೂ ಕಾರ್ಯಕರ್ತರು ಭಾರಿ ವಿರೋಧವನ್ನು ವ್ಯಕ್ತಪಡಿಸಿದ್ದರು.
ಇದನ್ನು ಓದಿ: Maha Shivaratri 2024: ಶಿವರಾತ್ರಿ ಮಹತ್ವ
ಇಂದು ಸೋಮವಾರ ಕಾರ್ಯಕರ್ತರ ಸಭೆಗೆ ಎಂದು ಅನಂತ ಕುಮಾರ್ ಹೆಗಡೆ ಅವರು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ನಾನಿದ್ದೇನೆ ನಡೀರಿ ಎಂದು ಹೇಳಿ ಅನಂತ ಕುಮಾರ್ ಹೆಗಡೆ ಅವರು ತೆರವು ಮಾಡಲಾಗಿದ್ದ ಸ್ಥಳದಲ್ಲೇ ಹನುಮ ಧ್ವಜವನ್ನು ಹಾರಿಸಿದರು. ಅಲ್ಲದೇ ವೀರ ಸಾವರ್ಕರ್ ಅವರ ಬೋರ್ಡ್ ಕೂಡ ಹಾಕಿದರು.
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.