- ಕಾಮಿಡಿ ಕಿಲಾಡಿಗಳು ವಿನ್ನರ್ ರಾಕೇಶ್ ಪೂಜಾರಿ ನಿಧನ.
- ಕಾಂತಾರ-೨ ಚಿತ್ರೀಕರಣದಲ್ಲಿದ್ದ ರಿಷಬ್ ಶೆಟ್ಟಿ ಅಂತ್ಯ ಸಂಸ್ಕಾರಕ್ಕೆ ಗೈರು.
- ರಿಷಬ್ ಶೆಟ್ಟಿ ಅವರ ನಡೆಗೆ ರಾಕೇಶ್ ಆಪ್ತರ ತೀವ್ರ ಆಕ್ರೋಶ.
ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ (Rakesh Poojary) ಅವರು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದು ಕನ್ನಡ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಕೇವಲ ಯುವ ವಯಸ್ಸಿನಲ್ಲಿಯೇ ರಾಕೇಶ್ ಅವರು ಲೋ ಬಿಪಿ ಮತ್ತು ಪಲ್ಸ್ ರೇಟ್ ಕಡಿಮೆಯಾದ ಕಾರಣ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರ ನಿಧನದ ಸುದ್ದಿ ತಿಳಿದು ಅವರ ಆಪ್ತರು, ಕುಟುಂಬಸ್ಥರು ಮತ್ತು ಕನ್ನಡ ಚಿತ್ರರಂಗದ ಅನೇಕ ಗಣ್ಯರು ದುಃಖವನ್ನು ವ್ಯಕ್ತಪಡಿಸಿದ್ದರು.
ಆದರೆ ಈ ದುಃಖದ ನಡುವೆಯೇ, ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರ ವಿರುದ್ಧ ಆಕ್ರೋಶದ ಕೂಗುಗಳು ಕೇಳಿಬರುತ್ತಿವೆ. ಇದಕ್ಕೆ ಕಾರಣ ರಾಕೇಶ್ ಪೂಜಾರಿ ಅವರ ಅಂತ್ಯ ಸಂಸ್ಕಾರಕ್ಕೆ ರಿಷಬ್ ಶೆಟ್ಟಿ ಹಾಜರಾಗದಿರುವುದು.
ರಾಕೇಶ್ ಪೂಜಾರಿ ಅವರು ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಸಿನಿಮಾ ಕಾಂತಾರ-2 (Kantara 2) ರಲ್ಲಿ ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದರು. ಹೀಗಿರುವಾಗ, ಚಿತ್ರೀಕರಣದ ವೇಳೆ ಕೇವಲ 30 ಕಿಲೋಮೀಟರ್ ದೂರದಲ್ಲಿದ್ದರೂ ರಿಷಬ್ ಶೆಟ್ಟಿ ಅವರು ರಾಕೇಶ್ ಅವರ ಅಂತಿಮ ದರ್ಶನಕ್ಕೆ ಬರಲಿಲ್ಲ ಎಂಬುದು ರಾಕೇಶ್ ಅವರ ಆಪ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ, ಮಗನನ್ನು ಕಳೆದುಕೊಂಡ ದುಃಖದಲ್ಲಿರುವ ತಾಯಿಗೆ ರಿಷಬ್ ಶೆಟ್ಟಿ ಅವರು ಸಾಂತ್ವನವನ್ನೂ ಹೇಳಲಿಲ್ಲ ಎಂದು ರಾಕೇಶ್ ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ: ಒಂದು ಕೆಜಿ ಮಾವಿನ ಹಣ್ಣಿಗೆ ₹2,50,000 ರೂಪಾಯಿ!
ಚಿತ್ರೀಕರಣಕ್ಕೆ ಹೋದ ದಿನದಿಂದ ಪ್ರತಿಕ್ಷಣದ ಮಾಹಿತಿಯನ್ನು ತಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳುತ್ತಿದ್ದ ರಾಕೇಶ್ ಅವರು ಸುಮಾರು 60 ರಿಂದ 70 ದಿನಗಳ ಕಾಲ ಕಾಂತಾರ ಸಿನಿಮಾದ (kantara Film) ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಕಾಂತಾರ ಚಿತ್ರತಂಡದೊಂದಿಗೆ ಉತ್ತಮ ಒಡನಾಟವನ್ನು ಹೊಂದಿದ್ದ ರಾಕೇಶ್ ಅವರ ಅಂತ್ಯ ಸಂಸ್ಕಾರಕ್ಕೆ ರಿಷಬ್ ಶೆಟ್ಟಿ ಬಾರದಿರುವುದು ನೆಟ್ಟಿಗರು ಮತ್ತು ರಾಕೇಶ್ ಅವರ ಆಪ್ತರ ಅಸಮಾಧಾನಕ್ಕೆ ಕಾರಣವಾಗಿದೆ. ರಿಷಬ್ ಶೆಟ್ಟಿ ಅವರು ಮಾನವೀಯತೆಯನ್ನೇ ಮರೆತರಾ ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ.
ಒಂದು ಕಡೆ ರಾಕೇಶ್ ಪೂಜಾರಿ ಅವರ ಅಕಾಲಿಕ ನಿಧನದ ದುಃಖ, ಇನ್ನೊಂದೆಡೆ ರಿಷಬ್ ಶೆಟ್ಟಿ ಅವರ ನಡೆಗೆ ವ್ಯಕ್ತವಾಗುತ್ತಿರುವ ಆಕ್ರೋಶ ಕನ್ನಡ ಚಿತ್ರರಂಗದಲ್ಲಿ ಚರ್ಚೆಯ ವಿಷಯವಾಗಿದೆ. ರಾಕೇಶ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೂ ರಿಷಬ್ ಅವರು ಅಂತ್ಯ ಸಂಸ್ಕಾರಕ್ಕೆ ಏಕೆ ಬರಲಿಲ್ಲ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಈ ಕುರಿತು ರಿಷಬ್ ಶೆಟ್ಟಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ರಾಕೇಶ್ ಅವರ ಆಪ್ತರು ಮತ್ತು ಅಭಿಮಾನಿಗಳು ಮಾತ್ರ ತೀವ್ರ ಬೇಸರ ಮತ್ತು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ಪಾಕ್ ನೌಕಾಪಡೆಯಿಂದ ಬೆಂಗಳೂರು ಬಂದರು ಧ್ವಂಸ!
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
