ಜೂನ್ 11 ನೇ ತಾರೀಕಿನಿಂದ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಸೌಲಭ್ಯ ಸಿಗಲಿದೆ. [Shakti Scheme Karnataka] ಈಗಾಗಲೇ ಹಲವು ಷರತ್ತುಗಳನ್ನು ವಿಧಿಸಿರುವ ಕರ್ನಾಟಕ ರಾಜ್ಯ ಸರ್ಕಾರ ಈಗ ಇನ್ನೊಂದು ಹೊಸ ರೂಲ್ಸ್ ಅನ್ನು ಜಾರಿಗೊಳಿಸಿದೆ. ನಾಳೆ ವಿಧಾನಸೌಧದ ಮುಂದೆ ಶಕ್ತಿ ಯೋಜನೆ ಉದ್ಘಾಟನಾ ನಡೆಯಲಿದೆ.
| Join Our Whats App Group | Click Here To Join |
ಜೂನ್ 11 ನೇ ತಾರೀಕಿನಿಂದ ಮಹಿಳೆಯರು ಕರ್ನಾಟಕದ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. [Shakti Scheme Karnataka] ನಾಳೆ ಮಧ್ಯಾಹ್ನ ಒಂದು ಗಂಟೆಯಿಂದ ಈ ಸೇವೆ ಆರಂಭವಾಗಲಿದೆ. ಮಹಿಳೆಯರು ಬಸ್ ನಲ್ಲಿ ಯಾವುದೇ ಟಿಕೆಟ್ ಪಡೆಯುವ ಅವಶ್ಯಕತೆ ಇಲ್ಲ. ಐಷಾರಾಮಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿಲ್ಲ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಕಲಿ..!
ಈಗ ಸದ್ಯಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ಯಾರಿಗೂ ವಿತರಿಸಲಾಗಿಲ್ಲ. ಆದ ಕಾರಣ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಕಾರ್ಡ್, ಅಥವಾ ಬೇರೆ ಯಾವುದಾದರು ಸರ್ಕಾರದ ಫೋಟೋ ಇರುವ ಅಧಿಕೃತ ದಾಖಲೆಗಳನ್ನು ಹೊಂದಿರಬೇಕಾಗುತ್ತೆ.
ಉಚಿತ ಬಸ್ ಪ್ರಯಾಣ ಮಾಡಲು ಬೇಕಾದ ಅರ್ಹತೆಗಳು
- ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು
- ಪ್ರಯಾಣಿಸುವಾಗ ಮಹಿಳೆಯ ಬಳಿ ಆಧಾರ್ ಕಾರ್ಡ್ ಅಥವಾ ಬಿ ಪಿ ಎಲ್ ಕಾರ್ಡ್ ಅನ್ನು ಹೊಂದಿರಬೇಕು
- ಕರ್ನಾಟಕದ ಸರ್ಕಾರಿ ಬಸ್ ನಲ್ಲಿ ಮಾತ್ರ ಪ್ರಯಾಣಿಸಬಹುದಾಗಿದೆ
- ಐಷಾರಾಮಿ ಹವಾನಿಯಂತ್ರಿತ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವಂತಿಲ್ಲ
- ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು
ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ಇನ್ನು ಮೂರು ತಿಂಗಳ ಒಳಗೆ ವಿತರಿಸಲಾಗುವುದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ಇದನ್ನೂ ಓದಿ: ಈ ಕೆಲಸ ಮಾಡಿದ್ರೆ ಮಾತ್ರ 200 ಯೂನಿಟ್ ಉಚಿತ ವಿದ್ಯುತ್ ಸಿಗುತ್ತೆ
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
