
ಪಹಲ್ಗಾಮ್ ದಾಳಿಗೆ ಭಾರತೀಯ ಯೋಧರು ‘ಆಪರೇಷನ್ ಸಿಂಧೂರ’ದ ಮೂಲಕ ತಕ್ಕ ತಿರುಗೇಟು ನೀಡಿದ್ದಾರೆ. ಆದರೆ, ಈ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವಿನ ವಾತಾವರಣ ಮತ್ತಷ್ಟು ಉದ್ವಿಗ್ನಗೊಂಡಿದೆ. ಈ ಸಂದರ್ಭದಲ್ಲಿ, ಭಾರತದಲ್ಲಿ ನೆಲೆಸಿಕೊಂಡಿರುವ ಕೆಲವರು ಪಾಕಿಸ್ತಾನಕ್ಕೆ ಬಹಿರಂಗವಾಗಿ ಬೆಂಬಲ ಸೂಚಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ದೇಶದ್ರೋಹಿ ಕೃತ್ಯಕ್ಕೆ ಪುಣೆಯ ಕರ್ವೆ ನಗರದ ನಾಗರಿಕರು ತಕ್ಕ ಪಾಠ ಕಲಿಸಿದ್ದಾರೆ.
ಹೌದು, ಪುಣೆಯ ಕರ್ವೆ ನಗರದಲ್ಲಿ ಪ್ಯಾಲೆಸ್ಟೈನ್ ಮತ್ತು ಪಾಕಿಸ್ತಾನವನ್ನು ಬೆಂಬಲಿಸುವ ಕರಪತ್ರಗಳನ್ನು ವಿತರಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸ್ಥಳೀಯ ನಾಗರಿಕರು ಹಿಡಿದು ಥಳಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿವೆ. Meghaupadates ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಈ ಇಬ್ಬರು ವ್ಯಕ್ತಿಗಳು ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ್ದಾಗ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ.
ಅಷ್ಟೇ ಅಲ್ಲ, ಈ ದೇಶದ್ರೋಹಿಗಳನ್ನು ರಕ್ಷಿಸಲು ಬಂದ ಇಬ್ಬರು ಮಹಿಳಾ ಸಹಚರರಿಗೂ ಸ್ಥಳೀಯರು ಬಿಟ್ಟಿಲ್ಲ. ಅವರಿಗೂ ಸಾರ್ವಜನಿಕರ ಆಕ್ರೋಶದ ಬಿಸಿ ತಟ್ಟಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದಂತೆ ಎರಡೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಳಕೆದಾರರೊಬ್ಬರು ಈ ಕೃತ್ಯವನ್ನು ‘ಅತಿರೇಕದ ವರ್ತನೆ’ ಎಂದು ಕರೆದರೆ, ಮತ್ತೊಬ್ಬರು ‘ಈ ದೇಶದಲ್ಲಿದ್ದುಕೊಂಡು ದೇಶದ್ರೋಹದಂತಹ ಕೃತ್ಯದಲ್ಲಿ ತೊಡಗಿರುವ ವ್ಯಕ್ತಿಗಳನ್ನು ಬೆಂಬಲಿಸಬೇಡಿ. ಅವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಕಠಿಣವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನೊಬ್ಬ ಬಳಕೆದಾರರಂತೂ ‘ಈ ವ್ಯಕ್ತಿಗಳು ನಿಜವಾದ ದೇಶದ್ರೋಹಿಗಳು, ಇವರನ್ನು ಇಷ್ಟಕ್ಕೆ ಸುಮ್ಮನೆ ಬಿಡಬಾರದು’ ಎಂದು ತಮ್ಮ ಆಕ್ರೋಶವನ್ನು ತೋರ್ಪಡಿಸಿದ್ದಾರೆ.
ಇದನ್ನೂ ಓದಿ: ಒಂದೇ ದಿನದಲ್ಲಿ ಎರಡು ಬಾರಿ ಕುಸಿದ ಚಿನ್ನದ ಬೆಲೆ! ಗ್ರಾಹಕರಿಗೆ ಭರ್ಜರಿ ಲಾಭ!
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ನಂತರ ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ತೀವ್ರವಾದ ಆಕ್ರೋಶ ವ್ಯಕ್ತವಾಗಿದೆ. ಭಾರತೀಯ ಯೋಧರು ನಡೆಸಿದ ‘ಆಪರೇಷನ್ ಸಿಂಧೂರ’ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದರೂ, ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ. ಇಂತಹ ಸೂಕ್ಷ್ಮ ಸಮಯದಲ್ಲಿ ದೇಶದಲ್ಲಿಯೇ ಕೆಲವರು ಶತ್ರು ರಾಷ್ಟ್ರವನ್ನು ಬೆಂಬಲಿಸುತ್ತಿರುವುದು ನಿಜಕ್ಕೂ ಖಂಡನೀಯ.
ಪುಣೆಯಲ್ಲಿ ನಡೆದ ಈ ಘಟನೆ ದೇಶದ್ರೋಹಿಗಳಿಗೆ ಸಾರ್ವಜನಿಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ತಮ್ಮ ದೇಶದ ವಿರುದ್ಧವಾಗಿ ನಿಲ್ಲುವವರನ್ನು ಭಾರತೀಯರು ಎಂದಿಗೂ ಸಹಿಸುವುದಿಲ್ಲ ಎಂಬುದನ್ನು ಈ ಘಟನೆ ತೋರಿಸುತ್ತದೆ. ಸದ್ಯಕ್ಕೆ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಸಾರ್ವಜನಿಕರ ಈ ಆಕ್ರೋಶ ದೇಶ ವಿರೋಧಿ ಕೃತ್ಯಗಳನ್ನು ಎಸಗುವವರಿಗೆ ಒಂದು ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಭಾರತೀಯರು ಸಹಿಸುವುದಿಲ್ಲ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ.
ಇದನ್ನೂ ಓದಿ: ಸಂಧಾನದ ನೆಪದಲ್ಲಿ ಅಮೆರಿಕಾ ಡಬಲ್ ಗೇಮ್? ಉಗ್ರರಿಗೆ ಪಹಲ್ಗಾಮ್ ಸ್ಯಾಟ್ಲೈಟ್ ಫೋಟೋ ಮಾರಾಟ?
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.