
Republic Day 2025 Speech in Kannada
ಗಣರಾಜ್ಯೋತ್ಸವ ಭಾಷಣ 2025: ಭಾರತದಲ್ಲಿ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಏಕಾಹರಣೆ ಮಾಡುತ್ತೇವೆ. ಈ ಬಾರಿ ನಾವು 76 ನೇ ಗಣರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ನಿಮ್ಮ ಮಕ್ಕಳಿಗೆ ಭಾಷಣ ಸ್ಪರ್ಧೆ ಇದ್ದರೆ ನಿಮ್ಮ ಮಕ್ಕಳಿಗಾಗಿ ಗಣರಾಜ್ಯೋತ್ಸವದ ಭಾಷಣ (Republic Day 2025 Speech in Kannada) ಇಲ್ಲಿದೆ ನೋಡಿ.
ಭಾರತದ ಸಂವಿಧಾನವನ್ನು 1949 ರ ನವೆಂಬರ್ 26 ರಂದು ಅಂಗೀಕರಿಸಲಾಯಿತು ಮತ್ತು 1950 ರ ಜನವರಿ 26 ರಂದು ಜಾರಿಗೆ ಬಂದಿತು. ಭಾರತದ ಸಂವಿಧಾನವನ್ನು ಜಾರಿಗೆ ತಂದ ದಿನವನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಗಣರಾಜ್ಯೋತ್ಸವದಂದು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ದೇಶದ ಪ್ರಮುಖ ಆಕರ್ಷಣೆಯಾಗಿದೆ. ಈ ಪರೇಡ್ನಲ್ಲಿ ಸಶಸ್ತ್ರ ಪಡೆಗಳು ತಮ್ಮ ಶಕ್ತಿ ಪ್ರದರ್ಶನ ಮಾಡುತ್ತವೆ ಮತ್ತು ವಿವಿಧ ರಾಜ್ಯಗಳ ಸಾಂಸ್ಕೃತಿಕ ನೃತ್ಯಗಳು ಪ್ರದರ್ಶನಗೊಳ್ಳುತ್ತವೆ.
ಗಣರಾಜ್ಯೋತ್ಸವ ಭಾಷಣ
ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾವಿಂದು 76 ನೇ ಗಣರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದೇವೆ. ಭಾರತದ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನವನ್ನು ಆಚರಣೆ ಮಾಡಲಾಗುತ್ತೆ. ಪ್ರಜಾಪ್ರಭುತ್ವಕ್ಕೆ ಇನ್ನೊಂದು ಹೆಸರೇ ಭಾರತ. ಜಗತ್ತಿನಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನ ಹೊಂದಿರುವ ದೇಶ ಎಂದರೆ ಅದು ಭಾರತ. ನಮ್ಮ ಭಾರತದ ಸಂವಿಧಾನವನ್ನು 105 ಬಾರಿ ತಿದ್ದು ಪಡಿ ಮಾಡಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ದೇಶದ ಪ್ರಮುಖ ಆಕರ್ಷಣೆಯಾಗಿದೆ. ಈ ಪರೇಡ್ನಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಸೇನೆಯ ಧೈರ್ಯ ಮತ್ತು ಶೌರ್ಯವನ್ನು ಪ್ರದರ್ಶಿಸಲಾಗುತ್ತದೆ. ಇದರ ಜೊತೆಗೆ, ವಿವಿಧ ರಾಜ್ಯಗಳ ಸಾಂಸ್ಕೃತಿಕ ನೃತ್ಯಗಳು ಮತ್ತು ಮೆರವಣಿಗೆಗಳು ನಡೆಯುತ್ತವೆ.
ಗಣರಾಜ್ಯೋತ್ಸವದ ದಿನದಂದು, ಧೈರ್ಯ ಮತ್ತು ಸಾಹಸ ತೋರಿದ ಮಕ್ಕಳನ್ನು ಅಭಿನಂದಿಸಲಾಗುತ್ತದೆ. ಇದು ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರಪತಿಗಳು ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ರಾಷ್ಟ್ರಪತಿಗಳು ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಮಹಾದಂಡನಾಯಕರೂ ಆಗಿದ್ದಾರೆ. ತಮ್ಮ ಭಾಷಣದಲ್ಲಿ ದೇಶದ ಪ್ರಗತಿ, ಸಾಧನೆಗಳು ಮತ್ತು ಭವಿಷ್ಯದ ಗುರಿಗಳ ಬಗ್ಗೆ ಮಾತನಾಡುತ್ತಾರೆ.
ಗಣರಾಜ್ಯೋತ್ಸವವು ಶಾಂತಿ, ಸೌಹಾರ್ದ ಮತ್ತು ಸಹಬಾಳ್ವೆಯ ಸಂದೇಶವನ್ನು ನೀಡುತ್ತದೆ. ನಮ್ಮ ದೇಶದ ಸಂವಿಧಾನವು ನಮಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸುತ್ತದೆ. ನಾವು ನಮ್ಮ ಸಂವಿಧಾನವನ್ನು ಅಭ್ಯಾಸ ಮಾಡಿ, ಅದರ ಆಶಯಗಳನ್ನು ಅನುಸರಿಸಬೇಕು. ನಮ್ಮ ದೇಶದ ಸಾರ್ವಭೌಮತ್ವವನ್ನು ಕಾಪಾಡಲು ಮತ್ತು ದೇಶದ ಪ್ರಗತಿಗೆ ಕೊಡುಗೆ ನೀಡಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ.
ಗಣರಾಜ್ಯೋತ್ಸವದ ದಿನವು ನಮ್ಮ ದೇಶದ ಏಕತೆ ಮತ್ತು ಅಖಂಡತೆಯನ್ನು ಸಂಕೇತಿಸುತ್ತದೆ. ಈ ದಿನವು ನಮ್ಮನ್ನು ಒಂದುಗೂಡಿಸಿ, ನಮ್ಮ ದೇಶದ ಬಗ್ಗೆ ಹೆಮ್ಮೆ ಪಡುವಂತೆ ಮಾಡುತ್ತದೆ. ಜೈ ಹಿಂದ್ , ಜೈ ಭಾರತ.
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.