
ಬ್ರಾಹ್ಮೀ ಮೂಹೂರ್ತ ಅಥವಾ ಬ್ರಹ್ಮ ಮೂಹೂರ್ತದ ಬಗ್ಗೆ ನೀವೆಲ್ಲ ಕೇಳಿರಬಹದು. ಹಾಗಾದರೆ ಬ್ರಾಹ್ಮೀ ಮೂಹೂರ್ತ ಆರಂಭವಾಗುವ ಸರಿಯಾದ ಸಮಯ ಯಾವುದು? ಬ್ರಹ್ಮ ಮೂಹೂರ್ತದಲ್ಲಿ ಏಳುವುದರಿಂದ ಏನೆಲ್ಲಾ ಲಾಭಗಳಿವೆ ನೋಡಿ.
ಆಯುರ್ವೇದದ ಪ್ರಕಾರ ಮುಂಜಾನೆಯ ನಸುಕಿನ 03:00 ರಿಂದ 06:00 ರವರೆಗಿನ ಸಮಯ. ನಮ್ಮ ಪ್ರಾಚೀನ ಋಷಿಮುನಿಗಳು ಈ ಸಮಯಕ್ಕೆ ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದ.
ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.
ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇಕಡಾ
45ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ.
ಗೋಹತ್ಯೆ ಮಾಡುವವರು ಮುಂದಿನ ಜನ್ಮದಲ್ಲಿ ತಾವೇ ಗೋವಾಗಿ ಹತ್ಯೆ ಆಗುತ್ತಾರೆ
ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ
ಸಂಚಾರವಾಗುತ್ತದೆಂದು ಆಯುರ್ವೇದ ತಿಳಿಸುತ್ತದೆ.
ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ.
ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ
ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ.
ದೇವರ ಶೃಂಗಾರ ಹಾಗೂ ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ
ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ.
ಭಗವಂತನ ಸ್ಮರಣೆಯ ನಂತರ ಮೊಸರು, ತುಪ್ಪ, ಕನ್ನಡಿ, ಬಿಲ್ವಪತ್ರೆ, ಹೂವಿನ ಮಾಲೆ ಮುಂತಾದ ಪವಿತ್ರ ವಸ್ತುಗಳನ್ನು ನೋಡುವುದರಿಂದ ದಿನ ಶುಭವಾಗಿರುತ್ತದೆ.
ಸೀತೆಯನ್ನು ಹುಡುಕುತ್ತಾ ಸಾಗಿದ ಆಂಜನೇಯ ಬ್ರಹ್ಮ ಮುಹೂರ್ತದಂದೇ ಅಶೋಕವನ ತಲುಪಿದ್ದ. ಅಲ್ಲಿ ವೇದ ಮಂತ್ರಗಳ ಉಚ್ಛಾರಣೆಯನ್ನು ಕೇಳಿದ್ದ, ಮತ್ತು ಯಜ್ಞಾದಿ ಕಾರ್ಯಗಳನ್ನು ನೋಡಿದ್ದನೆಂದು ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಲಾಗಿದೆ.
ರಾತ್ರಿಯ ವಿಶ್ರಾಂತಿಯ ನಂತರ ಮನಸ್ಸು ಶಾಂತ ಹಾಗೂ ಸ್ಥಿರವಾಗಿರುತ್ತದೆ. ವಾತಾವರಣದಲ್ಲಿ ಶುದ್ಧತೆಯೂ ಹೆಚ್ಚಿರುತ್ತದೆ. ಆಗ ದೇವರ ಉಪಾಸನೆ, ಧ್ಯಾನ, ಯೋಗ, ಪೂಜೆಗಳನ್ನು ಮಾಡುವುದರಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯದಿಂದ ಕೂಡಿರುತ್ತವೆ.
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.