
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನದ ಹೇಯ ಭಯೋತ್ಪಾದಕರು ನಡೆಸಿದ ಭೀಕರ ದಾಳಿಯಲ್ಲಿ 26 ಅಮಾಯಕ ಹಿಂದೂಗಳು ತಮ್ಮ ಕುಟುಂಬದವರ ಎದುರೇ ಕೊಲ್ಲಲ್ಪಟ್ಟರು. ಈ ಕೃತ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ಸೇನೆಯು ನಿರ್ಣಾಯಕ ಕಾರ್ಯಾಚರಣೆಗೆ ಮುಂದಾಗಿದೆ. ‘ಆಪರೇಷನ್ ಸಿಂಧೂರ್’ (Operation Sindoor) ಹೆಸರಿನ ಈ ಕಾರ್ಯಾಚರಣೆಯ ಮೂಲಕ ಭಾರತೀಯ ಸೇನೆ ಮತ್ತು ವಾಯುಪಡೆಯು ಪಾಕಿಸ್ತಾನದ ಉಗ್ರರ 9 ಅಡಗುತಾಣಗಳನ್ನು ಗುರಿಯಾಗಿಸಿ ಭೀಕರ ದಾಳಿ ನಡೆಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ನೆಲೆಗಳನ್ನು ಮಟ್ಟಹಾಕಲು ಭಾರತೀಯ ಸೇನೆಯು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಏಪ್ರಿಲ್ 22ರಂದು ನಡೆದ ಭಯಾನಕ ದಾಳಿಯಲ್ಲಿ 26 ಅಮಾಯಕ ಮಹಿಳೆಯರ ಸಿಂಧೂರವನ್ನು ಅಳಿಸಿದ ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತ ಕೈಗೊಂಡಿರುವ ಅತಿದೊಡ್ಡ ಮಿಲಿಟರಿ ಕಾರ್ಯಾಚರಣೆಯೇ ಈ ‘ಆಪರೇಷನ್ ಸಿಂಧೂರ್’.
‘ಸಿಂಧೂರ್’ ಪದದ ಅರ್ಥ!
‘ಸಿಂಧೂರ್’ ಎಂಬ ಪದವು ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿ, ರಕ್ಷಣೆ, ಸಮೃದ್ಧಿ, ಸೌಭಾಗ್ಯ ಮತ್ತು ಶಕ್ತಿ ದೇವತೆಯಾದ ಪಾರ್ವತಿ ಹಾಗೂ ದುರ್ಗಾ ಮಾತೆಯ ಸಂಕೇತವಾಗಿದೆ. ಈ ಹೆಸರಿನ ಮೂಲಕ ಭಾರತೀಯ ಸೇನೆಯ ಧೈರ್ಯ, ತ್ಯಾಗ, ಶೌರ್ಯ ಮತ್ತು ದೇಶವನ್ನು ರಕ್ಷಿಸುವ ಸಂಕಲ್ಪವನ್ನು ಸೂಚ್ಯವಾಗಿ ತಿಳಿಸಲಾಗಿದೆ. ಇದು ಜೀವನ ಮತ್ತು ಬಲಿದಾನದೊಂದಿಗೆ ಆಳವಾದ ಸಂಬಂಧವನ್ನು ಹೊಂದಿದೆ. ಸಿಂಧೂರ ಕೇವಲ ಒಂದು ವಸ್ತುವಲ್ಲ, ಭಾರತೀಯ ಸಂಸ್ಕೃತಿಯಲ್ಲಿ ಇದು ಆಳವಾದ ಭಾವನಾತ್ಮಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಮೌಲ್ಯವನ್ನು ಹೊಂದಿದೆ.
‘ಆಪರೇಷನ್ ಸಿಂಧೂರ್’ ಭಾರತೀಯ ಸೇನೆಯ ದಿಟ್ಟತನದ ಪ್ರತೀಕವಾಗಿದ್ದು, ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುವ ನಮ್ಮ ಬದ್ಧತೆಯನ್ನು ಇದು ತೋರಿಸುತ್ತದೆ. ಪಹಲ್ಗಾಮ್ನಲ್ಲಿ ನಡೆದ ಅಮಾನುಷ ಕೃತ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಮೂಲಕ, ಭಾರತವು ತನ್ನ ನಾಗರಿಕರ ರಕ್ಷಣೆಗೆ ಸದಾ ಸಿದ್ಧವಿದೆ ಎಂಬುದನ್ನು ಜಗತ್ತಿಗೆ ಸಾರಿ ಹೇಳಿದೆ. ಈ ಕಾರ್ಯಾಚರಣೆಯು ಭಯೋತ್ಪಾದಕ ಸಂಘಟನೆಗಳಿಗೆ ಒಂದು ಸ್ಪಷ್ಟ ಸಂದೇಶವನ್ನು ರವಾನಿಸಿದೆ – ಭಾರತವು ತನ್ನ ಮೇಲೆ ನಡೆಯುವ ಯಾವುದೇ ದಾಳಿಯನ್ನು ಸಹಿಸುವುದಿಲ್ಲ ಮತ್ತು ತಕ್ಕ ಪ್ರತ್ಯುತ್ತರ ನೀಡಲು ಸದಾ ಸನ್ನದ್ಧವಾಗಿರುತ್ತದೆ.
ಇದನ್ನೂ ಓದಿ: ಅಪಘಾತದಲ್ಲಿ ಸಿಲುಕಿದವರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್! 1.5 ಲಕ್ಷದವರೆಗೆ ಉಚಿತ ಚಿಕಿತ್ಸೆ!
ಆಪರೇಷನ್ ಸಿಂಧೂರ್ ಎಂದರೇನು?
‘ಆಪರೇಷನ್ ಸಿಂಧೂರ್’ ಎಂದರೇನು ಎಂಬ ಪ್ರಶ್ನೆಗೆ ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಇತ್ತೀಚೆಗೆ ನಡೆದ ವೈಮಾನಿಕ ದಾಳಿಯ ನಂತರ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯಲ್ಲಿ, ಈ ಕಾರ್ಯಾಚರಣೆಯ ಮುಖ್ಯ ಉದ್ದೇಶ ಕೇವಲ ಭಯೋತ್ಪಾದಕರ ಅಡಗುತಾಣಗಳನ್ನು ನಿರ್ನಾಮ ಮಾಡುವುದು ಎಂದು ತಿಳಿಸಲಾಗಿದೆ. ಈ ದಾಳಿಯು ಯಾವುದೇ ನೆರೆಯ ರಾಷ್ಟ್ರದೊಂದಿಗೆ ಸಂಘರ್ಷವನ್ನು ಹೆಚ್ಚಿಸುವ ಅಥವಾ ಹೋರಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಭಯೋತ್ಪಾದನೆಯನ್ನು ಮಟ್ಟಹಾಕುವ ಭಾರತದ ಬದ್ಧತೆಯನ್ನು ಈ ಕಾರ್ಯಾಚರಣೆ ಎತ್ತಿ ತೋರಿಸುತ್ತದೆ.
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.