
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಘೋಷಣೆಯಾದ ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ, ಲಖನೌನಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಘಟನೆ ಭಾರತದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಬ್ರಹ್ಮೋಸ್ (Brahmos Missile) ಕ್ಷಿಪಣಿಯ ಮುಂದೆ ನಿಂತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಫೋಟೋ ಹಲವು ಅರ್ಥಗಳನ್ನು ನೀಡುವಂತಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 2018 ರಲ್ಲಿ ಘೋಷಿಸಿದ ಡಿಫೆನ್ಸ್ ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯ ಭಾಗವಾಗಿ ಈ ಘಟಕವನ್ನು ಸ್ಥಾಪಿಸಲಾಗಿದೆ. ದೇಶೀಯವಾಗಿ ಅತ್ಯಾಧುನಿಕ ಕ್ಷಿಪಣಿಗಳನ್ನು ಉತ್ಪಾದಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಬ್ರಹ್ಮೋಸ್ ಘಟಕದಲ್ಲಿ ವಾರ್ಷಿಕವಾಗಿ 80-100 ಬ್ರಹ್ಮೋಸ್ ಕ್ಷಿಪಣಿಗಳನ್ನು ಉತ್ಪಾದಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಬ್ರಹ್ಮೋಸ್ ಕ್ಷಿಪಣಿಗಳು ಖಂಡಾಂತರ ಕ್ಷಿಪಣಿಗಳಾಗಿದ್ದು, ವೈರಿಗಳ ಯಾವುದೇ ದಾಳಿಯನ್ನು ನಿಗ್ರಹಿಸುವ ಸಾಮರ್ಥ್ಯವನ್ನು ಹೊಂದಿವೆ. ಡ್ರೋನ್ ಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿರುವ ಈ ಕ್ಷಿಪಣಿಗಳನ್ನು ಇತ್ತೀಚಿನ ಭಾರತ-ಪಾಕ್ ಸಂಘರ್ಷದಲ್ಲಿ ಬಳಸಲಾಗಿತ್ತು. ಭೂಮಿ ಮತ್ತು ಸಾಗರ ಪ್ರದೇಶದಿಂದ 800-900 ಕಿ.ಮೀ ದೂರದವರೆಗೆ ಹಾರಾಟ ನಡೆಸುವ ಈ ಕ್ಷಿಪಣಿಗಳು, ಆಗಸದಿಂದ 450-500 ಕಿ.ಮೀ ದೂರದವರೆಗೆ ಚಲಿಸುತ್ತವೆ.
ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPO ಮಶಿನೋಸ್ಟ್ರೋಯೆನಿಯಾ ನಡುವಿನ ಜಂಟಿ ಉದ್ಯಮವಾಗಿ ಅಭಿವೃದ್ಧಿಪಡಿಸಲಾದ ಬ್ರಹ್ಮೋಸ್ ಕ್ಷಿಪಣಿಗಳು ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳಾಗಿವೆ. ಭಾರತದ ಬ್ರಹ್ಮಪುತ್ರ ನದಿ ಮತ್ತು ರಷ್ಯಾದ ಮಾಸ್ಕ್ವಾ ನದಿಯ ಸಂಯೋಜಿತ ಹೆಸರೇ ‘ಬ್ರಹ್ಮೋಸ್’.
ಇದನ್ನೂ ಓದಿ: ಹುತಾತ್ಮ ಯೋಧ ಮುರಳಿ ನಾಯಕ್ ಕುಟುಂಬಕ್ಕೆ ₹75 ಲಕ್ಷ, 5 ಎಕರೆ ಜಮೀನು ನೀಡಿದ ಪವನ್ ಕಲ್ಯಾಣ್
ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಆಡಳಿತ (MTCR) ಕ್ಕೆ ಅನುಗುಣವಾಗಿ ಆರಂಭದಲ್ಲಿ 290 ಕಿ.ಮೀ.ಗೆ ಸೀಮಿತಗೊಳಿಸಲಾಗಿದ್ದ ಈ ಕ್ಷಿಪಣಿಗಳನ್ನು, ಭಾರತ 2016 ರಲ್ಲಿ MTCR ಗೆ ಸೇರಿದ ನಂತರ ಭೂಮಿ ಮತ್ತು ಹಡಗು ಆಧಾರಿತ ಆವೃತ್ತಿಗಳಿಗೆ 800-900 ಕಿ.ಮೀ.ಗೆ ವಿಸ್ತರಿಸಲಾಗಿದೆ. ವಾಯು-ಉಡಾವಣಾ ಆವೃತ್ತಿಗಳು 450-500 ಕಿ.ಮೀ. ವ್ಯಾಪ್ತಿಯನ್ನು ಹೊಂದಿವೆ.
ಬ್ರಹ್ಮೋಸ್ ಕ್ಷಿಪಣಿಯ ಸಾಮರ್ಥ್ಯ
ಬ್ರಹ್ಮೋಸ್ ಕ್ಷಿಪಣಿಗಳು ಭೂಮಿ, ಸಮುದ್ರ ಮತ್ತು ವಾಯು-ಆಧಾರಿತ ಗುರಿಗಳನ್ನು ಗುರಿಯಾಗಿಸುವ ಸಾಮರ್ಥ್ಯವನ್ನು ಹೊಂದಿವೆ. ಇವುಗಳನ್ನು ಭೂ-ಆಧಾರಿತ ಟ್ರಾನ್ಸ್ಪೋರ್ಟರ್ ಎರೆಕ್ಟರ್ ಲಾಂಚರ್ಗಳು (TEL), ಹಡಗುಗಳು, ಜಲಾಂತರ್ಗಾಮಿ ನೌಕೆಗಳು ಮತ್ತು ಯುದ್ಧ ವಿಮಾನಗಳಿಂದ ಉಡಾಯಿಸಬಹುದು.
ಭಾರತ ಮತ್ತು ರಷ್ಯಾ ನಡುವಿನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ ಬ್ರಹ್ಮೋಸ್ ಏರೋಸ್ಪೇಸ್ ಅನ್ನು ಫೆಬ್ರವರಿ 12, 1998 ರಂದು ಸ್ಥಾಪಿಸಲಾಯಿತು. ಇದರಲ್ಲಿ ಭಾರತ 50.5% ಮತ್ತು ರಷ್ಯಾ 49.5% ಪಾಲನ್ನು ಹೊಂದಿದೆ. ಲಖನೌನಲ್ಲಿ ಸ್ಥಾಪಿತವಾಗಿರುವ ಈ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕವು ಭಾರತದ ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಲ್ಲಿ ಈ ಘಟಕದ ಉದ್ಘಾಟನೆಯು ಭಾರತದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ.
ಇದನ್ನೂ ಓದಿ: ಭಾರತ ಪಾಕ್ ಕದನ ವಿರಾಮ, ನಾಳೆಯಿಂದಲೇ ಐಪಿಎಲ್ ಶುರುವಾಗುತ್ತೆ?
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.