
ರಾಜ್ಯಾದ್ಯಂತ ಸಾಲು ಸಾಲು ಪ್ರಕರಣಗಳಿಂದ ಸುದ್ದಿಯಲ್ಲಿರುವ ಧರ್ಮಸ್ಥಳದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಾದ ಬಸವರಾಜ್ ಪೊಲೀಸ್ ಪಾಟೀಲ್ (35) ಅವರು ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗದ ಹಳೆಯ ರಸ್ತೆಯಲ್ಲಿ ಜುಲೈ 20ರಂದು ಕೊಳೆತ ಶವವಾಗಿ ಪತ್ತೆಯಾಗಿದ್ದಾರೆ.
ಬಸವರಾಜ್ ಅವರು ಜುಲೈ 15ರ ಮಂಗಳವಾರದಿಂದಲೇ ಶಾಲೆಯಿಂದ ಕಾಣೆಯಾಗಿದ್ದರು. ಶಾಲೆಯ ಅಡುಗೆ ಕೋಣೆಯ ಕೀಯನ್ನು ತಮ್ಮೊಂದಿಗೇ ತೆಗೆದುಕೊಂಡು ಹೋಗಿದ್ದರಿಂದ, ಅವರ ನಾಪತ್ತೆ ಶಾಲೆಯ ಆಡಳಿತ ಮಂಡಳಿಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಊರು ಸುತ್ತಮುತ್ತ ಹುಡುಕಾಡಿದರೂ ಬಸವರಾಜ್ ಪತ್ತೆಯಾಗದೆ ಕುಟುಂಬಸ್ಥರು ಭಯಭೀತರಾಗಿದ್ದರು.
4 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ… ಮಕ್ಕಳ ತಜ್ಞೆ ಹೀಗೆ ಮಾಡಿದ್ಯಾಕೆ..?
ಈ ಘಟನೆಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಹುಟ್ಟಿಕೊಂಡಿವೆ. ಜುಲೈ 14ರ ಸೋಮವಾರದಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು, ಅದರ ಮರುದಿನವೇ ಬಸವರಾಜ್ ಕಾಣೆಯಾಗಿದ್ದರು. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದರೂ, ಬಸವರಾಜ್ ನದಿಯಲ್ಲಿ ಸ್ನಾನಕ್ಕೆ ತೆರಳಿದಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಕೊಳೆತ ಶವವಾಗಿ ಪತ್ತೆಯಾಗಿರುವುದು ಮತ್ತು ಶಾಲೆಯಿಂದ ಕಾಣೆಯಾದ ರೀತಿ, ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿಯ ನಂತರದ ದಿನವೇ ನಾಪತ್ತೆಯಾಗಿರುವುದು ಘಟನೆಯ ಸುತ್ತ ಮತ್ತಷ್ಟು ಅನುಮಾನಗಳನ್ನು ದಟ್ಟವಾಗಿಸಿದೆ.
Sri Rama is a seasoned journalist with four years of experience, specializing in capturing and analyzing the latest news and trending stories. He brings extensive expertise in news collection, reporting, and interviewing across a broad spectrum of topics, including politics.