
ಕನ್ನಡ ನೆಲದಲ್ಲಿ ಕನ್ನಡಿಗರೇ ಸಾರ್ವಭೌಮರು ಎಂಬುದು ಸತ್ಯವಾದರೂ, ಹೊರಗಿನಿಂದ ಬಂದು ಇಲ್ಲಿನವರ ಮೇಲೆ ದಬ್ಬಾಳಿಕೆ ನಡೆಸುವುದು ಹೊಸತೇನಲ್ಲ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ವಿಡಿಯೊದಲ್ಲಿ ದುರಹಂಕಾರಿ ವ್ಯಕ್ತಿಯೊಬ್ಬರು ಮಹಿಳೆಯ ಕೈ ಹಿಡಿದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಹಿಂಬದಿಯಿಂದ ಬಂದ ಕನ್ನಡಿಗನೊಬ್ಬ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾನೆ. ಇದರಿಂದ ಕೋಪಗೊಂಡ ಆ ವ್ಯಕ್ತಿ, “ನೀನು ರೆಕಾರ್ಡ್ ಮಾಡಬೇಡ. ನೀನು ಕನ್ನಡಿಗನಾಗಿದ್ದರೂ, ಬೆಂಗಳೂರಿನಲ್ಲಿದ್ದರೂ ಹಿಂದಿಯಲ್ಲಿ ಮಾತನಾಡು. ಹಿಂದಿ, ಹಿಂದಿಯಲ್ಲಿ ಮಾತನಾಡು” ಎಂದು ಬೆದರಿಕೆ ಹಾಕಿದ್ದಾನೆ. ಕೂಡಲೇ ಅಲ್ಲಿಗೆ ಓಡಿ ಬಂದ ಮಹಿಳೆ ಆತನನ್ನು ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದಾಳೆ. ಆದರೂ ಸಹ ಆತ ಕನ್ನಡಿಗನೊಂದಿಗೆ ವಾಗ್ವಾದಕ್ಕೆ ಮುಂದಾಗಿದ್ದಾನೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಹೊಟ್ಟೆಪಾಡಿಗಾಗಿ ಕರ್ನಾಟಕಕ್ಕೆ ವಲಸೆ ಬಂದಿರುವ ವ್ಯಕ್ತಿಯೊಬ್ಬ ಕನ್ನಡಿಗರಿಗೆ ಬೆದರಿಕೆ ಹಾಕುತ್ತಿರುವುದನ್ನು ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿಗೆ ಬಂದು ಹಿಂದಿ ಮಾತನಾಡಬೇಕೆಂದು ಆತ ಧಮ್ಕಿ ಹಾಕಿರುವುದು ಕನ್ನಡಿಗರನ್ನು ಕೆರಳಿಸಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದು ಯಾವ ದಿನಾಂಕದಂದು ಸಂಭವಿಸಿದೆ ಎಂಬುದು ಇನ್ನೂ ತಿಳಿದುಬರಬೇಕಿದೆ.
ಇದನ್ನೂ ಓದಿ: ಹಿಂದೂಗಳೇ ಮತಾಂತರ ಮಾಡಿ ಚಕ್ರವರ್ತಿ ಸೂಲಿಬೆಲೆ ಕರೆ!
Abhishek is an accomplished journalist with four years of experience in the media industry. He possesses extensive expertise in news collection, reporting, interviewing, and analyzing diverse contemporary issues, crafting engaging and informative content.