ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈಗ ಹಲವರಿಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಕಲಿಯೋ? ಅಥವಾ ಅಸಲಿಯೋ? ಎಂದು ಪ್ರಶ್ನೆ ಕಾಡುತ್ತಿದೆ. ಈ ಅರ್ಜಿ ನಮೂನೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಸಿ ಎಂ ಡಿ ಕೆ ಶಿವಕುಮಾರ್ ಹಾಗೂ ಮಹಿಳಾ ಕುಟುಂಬ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೋಟೋ ಗಳು ಸಹ ಇತ್ತು.
| Join What’s App Group | Click Here to join |
ಇದನ್ನು ನೋಡಿ ಹಲವು ಜನರು ಸಾಮಾಜಿಕ ಜಾಲತಾಣದಲ್ಲಿ ಬಂದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಸುಳ್ಳು ಎಂದು ಹೇಳುತ್ತಿದ್ದರು ಅದಕ್ಕೆ ಈಗ ಅರ್ಜಿ ನಮೂನೆಯ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆಯನ್ನು ನೀಡಿದ್ದಾರೆ. ಹಾಗಾದರೆ ಅವರು ಏನಂತ ಹೇಳಿದರು ಅಂತ ತಪ್ಪದೆ ತಿಳಿಯಿರಿ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಅರ್ಜಿ ತುಂಬಿ
ಇದನ್ನೂ ಓದಿ: ಬೇಗ ಈ ಕೆಲಸ ಮಾಡಿ ಇಲ್ಲ ಅಂದರೆ ಆಧಾರ್ ಕಾರ್ಡ್ ಇರಲ್ಲ
ಶುಕ್ರವಾರ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೃಹಲಕ್ಷ್ಮಿ ಯೋಜನೆಯ ನಮೂನೆ ನಿಜ. ಆದರೆ ಈಗ ಅದರಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಿದ್ದೇವೆ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆಯ ಅರ್ಜಿಯಲ್ಲಿ ಬ್ಯಾಂಕ್ ಪಾಸ್ ಬುಕ್ ಸೇರಿಸಲಾಗುತ್ತೆ. ಹಾಗೂ ಇದರ ಜೊತೆಗೆ ಜಾತಿ ಬದಲು ವರ್ಗ ಅಂತ ಹಾಕುತ್ತೇವೆ. ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತೆ. ಆಗಸ್ಟ್ 17 ಅಥವಾ 18 ನೇ ತಾರೀಕಿನಂದು ಉದ್ಘಾಟನಾ ಕಾರ್ಯಕ್ರಮ ಬೆಳಗಾವಿಯಲ್ಲಿ ಆಗಲಿದೆ ಎಂದು ಹೇಳಿದರು.
ಅಭಿಷೇಕ್ ಅವರು ಮಾಧ್ಯಮ ಕ್ಷೇತ್ರದಲ್ಲಿ ನಾಲ್ಕು ವರ್ಷದ ಅನುಭವ ಹೊಂದಿರುವ ಅನುಭವಸಂಪನ್ನ ಪತ್ರಕರ್ತ. ತಾಜಾ ಸುದ್ದಿ ಸಂಗ್ರಹಣೆ, ವರದಿಗಾರಿಕೆ, ಸಂದರ್ಶನ ಮತ್ತು ವಿವಿಧ ಪ್ರಸ್ತುತ ವಿಷಯಗಳ ವಿಶ್ಲೇಷಣೆಯಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಓದುಗರಿಗೆ ಆಕರ್ಷಕ ಮತ್ತು ಮಾಹಿತಿಪೂರ್ಣ ವಿಷಯವನ್ನು ತಲುಪಿಸುವುದು ಅವರ ಬರವಣಿಗೆಯ ಮುಖ್ಯ ಲಕ್ಷಣ.
